ಬೆಂಗಳೂರು: ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿ, ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟಿಸಿದವರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಗಾಝಾ ಮೇಲೆ ದಾಳಿ ನಡೆಸದಂತೆ ಭಾರತ ಸರಕಾರ ಇಸ್ರೇಲ್ ಮೇಲೆ ಒತ್ತಡ ತರಬೇಕು. ಫೆಲೆಸ್ತೀನ್ ಅನ್ನು ಪ್ರತ್ಯೇಕ ದೇಶವಾಗಿ ಗುರುತಿಸಿ ಅಲ್ಲಿನ ಜನರಿಗೆ ಮೂಲಭೂತ ಹಕ್ಕುಗಳು ನೀಡುವುದೇ ಸಮಸ್ಯೆಗೆ ಪರಿಹಾರವಾಗಿದೆ. ಎಂದು ಆಗ್ರಹಿಸಿ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಲಾಗಿತ್ತು.
ಯಾವುದೇ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಬಹುತ್ವ ಕರ್ನಾಟಕ ಸಂಘಟನೆಯ ಕಾರ್ಯಕರ್ತರ ಮೇಲೆ ಎಫ್ ಐಆರ್ ದಾಖಲಾಗಿದೆ.