Home ಜಾಲತಾಣದಿಂದ ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆ ಸರಳೀಕರಣ: ಸಚಿವ ಬಿ.ಸಿ. ನಾಗೇಶ್

ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆ ಸರಳೀಕರಣ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆಗಳನ್ನು  ಸರಳೀಕರಿಸಲಾಗಿದೆ. ಅತ್ಯಂತ ಕಡಿಮೆ ಹಂತಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ. ನೋಂದಣಿ, ನವೀಕರಣ ಮುಂತಾದ ಎಲ್ಲ ಪ್ರಕ್ರಿಯೆಗಳು ಈಗಾಗಲೇ

 ಆನ್‌ ಲೈನ್‌’ನಲ್ಲಿ ಲಭ್ಯವಿದ್ದು, ಇನ್ನಷ್ಟು ಸುಧಾರಿತ ರೀತಿಯಲ್ಲಿ ಎಲ್ಲ ಸೇವೆಗಳು ಶೀಘ್ರದಲ್ಲಿಯೇ ಆನ್‌ ಲೈನ್ ಮೂಲಕ ಲಭ್ಯವಾಗಲಿವೆ. ಕಡಿಮೆ ಸಮಯದಲ್ಲಿ ಹೆಚ್ಚು ಪಾರದರ್ಶಕವಾಗಿ ಸೇವೆಗಳು ಲಭ್ಯವಾಗುತ್ತವೆ. ಈ ಕುರಿತಾದ ಮಾಹಿತಿಯನ್ನು ಇಲಾಖೆಯ ವೆಬ್‌’ಸೈಟ್‌’ನಲ್ಲಿ ಪ್ರಕಟಿಸಲಾಗಿದೆ’ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.

Join Whatsapp
Exit mobile version