ಸಿಂದಗಿ, ಹಾನಗಲ್ ಉಪಚುನಾವಣಾ ಕದನ: ಇಂದು ಬಹಿರಂಗ ಪ್ರಚಾರ ಅಂತ್ಯ

Prasthutha|

ಬೆಂಗಳೂರು: ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ತೆರೆ ಬೀಳಲಿದೆ.

- Advertisement -

ರಾಜ್ಯದ ಗಮನ ಸೆಳೆದಿದ್ದ ಉಪಚಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌. ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಮೂರು ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದರು.

ಪ್ರಚಾರಕ್ಕೆ ಕೊನೆಯ ದಿನವಾದ ಬುಧವಾರ ಮೂರೂ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸಿ, ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದರು.

- Advertisement -

ಉಭಯ ಕ್ಷೇತ್ರಗಳಿಗೆ ಅಕ್ಟೋಬರ್​ 30ರಂದು ಚುನಾವಣೆ ನಡೆಯುತ್ತಿರುವ ಕಾರಣ ಅಕ್ಟೋಬರ್​ 27ರ ಸಂಜೆ 7ರಿಂದ ಅಕ್ಟೋಬರ್​ 30ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಸಿಂದಗಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿ, ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಕಣದಲ್ಲಿದ್ದು, ಜೆಡಿಎಸ್​​ನಿಂದ ನಾಜಿಯಾ ಶಕೀಲಾ ಅಂಗಡಿ ಸ್ಪರ್ಧೆ ಮಾಡಿದ್ದಾರೆ. ಹಾನಗಲ್​ ಕ್ಷೇತ್ರದಿಂದ ಬಿಜೆಪಿಯ ಶಿವರಾಜ್​ ಸಜ್ಜನ್​, ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಹಾಗೂ ಜೆಡಿಎಸ್​ ನಿಂದ ನಿಯಾಝ್ ​ ಶೇಖ್ ಕಣದಲ್ಲಿದ್ದಾರೆ.



Join Whatsapp