ಎಲ್ಲ ವಿದ್ಯಾರ್ಥಿಗಳ ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಶೇ. 50ರಷ್ಟು ಕಡಿತಗೊಳಿಸಲು ಎಸ್.ಐ.ಓ ಆಗ್ರಹ

Prasthutha|

ಬೆಂಗಳೂರು: ಪದವಿಯ ವಾರ್ಷಿಕ ಶುಲ್ಕ ಮತ್ತು ಪರೀಕ್ಷಾ ಶುಲ್ಕದ ಕಡಿತ ಹಾಗೂ ಸಾಂಕ್ರಾಮಿಕ ಸಮಯದಲ್ಲಿ ಅನಾಥರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಸೇರಿದಂತೆ ಇತರ  ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಎಸ್.ಐ.ಓ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಂಕ್ರಾಮಿಕದ ಕಾರಣಗಳಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲು ಶಿಕ್ಷಣದ ಎಲ್ಲ ಭಾಗಿದಾರರು ಅತ್ಯಂತ ತುರ್ತಾಗಿ ಸರ್ಕಾರ ಮೇಲೆ ಒತ್ತಡ ತರಬೇಕಾಗಿದೆ.  ಪ್ರಸ್ತುತ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರವೇಶ ಪ್ರಕ್ರಿಯೆಗಳು ಪ್ರಗತಿಯಲ್ಲಿರುವ ಈ ಸಂದರ್ಭದಲ್ಲಿ ಸರ್ಕಾರವು ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸುವ ಬದ್ಧತೆಯನ್ನು ತೋರಬೇಕಾಗಿದೆ. ಸಾಂಕ್ರಾಮಿಕವು ಸಮಾಜದ ಪ್ರತಿಯೊಂದು ವಿಭಾಗದ ಮೇಲೆ ಪರಿಣಾಮ ಬೀರಿದೆ. ಅನೇಕ ಕುಟುಂಬಗಳು ತಮ್ಮ ಏಕೈಕ ಆಧಾರಸ್ತಂಭ ವಾಗಿದ್ದವರನ್ನು ಕಳೆದುಕೊಂಡಿವೆ. ಈ  ನಡುವೆ ಅವರಲ್ಲಿ ಹಲವರು ಅನಾಥರಾಗಿದ್ದಾರೆ ಮತ್ತು ಬಹಳಷ್ಟು ಪೋಷಕರು / ಪಾಲಕರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ವಿದ್ಯಾರ್ಥಿಗಳ  ಹಿತದೃಷ್ಟಿಯಿಂದ ಈ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳಲು ಸರ್ಕಾರವು ತಕ್ಷಣ ಕಾರ್ಯ ಪ್ರವೃತ್ತರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಕುಟುಂಬದಲ್ಲಿನ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ಶೇಕಡಾ 50% ಪ್ರತಿಶತ ದಷ್ಟು ಕಡಿಮೆ ಮಾಡಬೇಕು. ಸಾಂಕ್ರಾಮಿಕ ರೋಗದಿಂದಾಗಿ ಅನಾಥವಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿಶೇಷ  ವಿದ್ಯಾರ್ಥಿ ವೇತನವನ್ನು ನೀಡಬೇಕು. ರಾಜ್ಯಾದ್ಯಂತ ಸಾಧ್ಯವಾದಷ್ಟು ಹೆಚ್ಚಿನ ಸಿಇಟಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಬೇಕು ಹಾಗೂ ಸಿಇಟಿ ಅಭ್ಯರ್ಥಿಗಳಿಗೆ ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ ದೂರದ ಪ್ರಯಾಣದ ಅಗತ್ಯ ಬೀಳದಿರುವ ಆಗೆ ವ್ಯವಸ್ಥೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -

 ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್ ತರಗತಿಗಳು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ ಎಂಬುದು ಹಲವು ವರದಿಗಳಿಂದ ಸಾಬೀತಾಗಿದೆ. ವಿಶೇಷವಾಗಿ ರಾಜ್ಯದ ಮಲೆನಾಡು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅನೇಕ ವಿದ್ಯಾರ್ಥಿಗಳು ಸೌಲಭ್ಯ ಹೊಂದಿಲ್ಲದಿರುವುದು ಹಾಗೂ ಆನ್ ಲೈನ್ ತರಗತಿಗಳು ತಲುಪಲು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು . ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯವಿರುವ ಜ್ಞಾನವನ್ನು ನೀಡುವ ಸಲುವಾಗಿ ಎಲ್ಲಾ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕೋರ್ಸ್ಗಳನ್ನು ವಿನ್ಯಾಸಗೊಳಿಸಿ ಅದನ್ನು ಕಾರ್ಯಗತಗೊಳಿಸಬೇಕು.   ರಾಜ್ಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡುವ ವಾರ್ಷಿಕ ಬಸ್ ಪಾಸ್ ಸೌಲಭ್ಯದ ವೆಚ್ಚವನ್ನು ಅರ್ಧಕ್ಕೆ ಕಡಿತಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Join Whatsapp