ರಾಯಚೂರು ವಿವಿಗೆ ರಾಜ್ಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸಲು ಆಗ್ರಹಿಸಿ SIO ಜಾಥಾ

Prasthutha|

ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಸೂಕ್ತ ನಿರ್ವಹಣೆಗಾಗಿ ಬರುವ ರಾಜ್ಯ ಬಜೆಟ್ ನಲ್ಲಿ ಅನುದಾನ ಒದಗಿಸಲು ಆಗ್ರಹಿಸಿ ಎಸ್.ಐ.ಓ ಲಿಂಗಸೂಗೂರು ಘಟಕದ ವತಿಯಿಂದ ಪ್ರತಿಭಟನಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -


ಜಾಥಾದಲ್ಲಿ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಯು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಆಗ್ರಹ ಪತ್ರವನ್ನು ಎಸ್.ಐ.ಓ ಲಿಂಗಸೂಗೂರು ಘಟಕದ ಅಧ್ಯಕ್ಷ ಅಬ್ದುಲ್ ವದೂದ್ ಅವರು ಸಹಾಯಕ ಆಯುಕ್ತರ ಮುಖಾಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ಅವರು ವಿಶ್ವವಿದ್ಯಾಲಯದ ಸೂಕ್ತ ನಿರ್ವಹಣೆಗಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಮಯದಲ್ಲಿ ಜಿಲ್ಲಾ ಕಾರ್ಯದರ್ಶಿ ಅಮೀರ್ ಮತ್ತು ಕಾರ್ಯದರ್ಶಿ ನಹೀಮ್ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.