ಮಂಗಳೂರು | ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಿ: ಬೃಂದಾ ಕಾರಟ್

Prasthutha|

ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳ ಪತ್ತೆಗಾಗಿ ಎಸ್ ಐಟಿ ರಚಿಸುವಂತೆ ಸಿಪಿಎಂ ನಾಯಕಿ, ಮಾಜಿ ಸಂಸದೆ ಬೃಂದಾ ಕಾರಟ್ ಆಗ್ರಹಿಸಿದ್ದಾರೆ.

- Advertisement -

ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ವಿನಾಯಕ ಬಾಳಿಗಾ ಮನೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಮಾತನಾಡಿದ  ಅವರು, ವಿನಾಯಕ ಬಾಳಿಗಾ ಹತ್ಯೆಯಾಗಿ ಆರು ವರ್ಷಗಳೇ ಕಳೆದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ. ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ಆರೋಪಿಗಳು ಆಡಳಿತ ಪಕ್ಷದ ಬೆಂಬಲದಿಂದ ರಕ್ಷಣೆ ಪಡೆಯುತ್ತಿದ್ದಾರೆ. ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳಿಗಳ ಪತ್ತೆಗಾಗಿ ಪ್ರಕರಣದ ಸಮಗ್ರ ತನಿಖೆಗೆ ಎಸ್ ಐಟಿ ರಚಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

Join Whatsapp