Home ಕರಾವಳಿ ಮಂಗಳೂರು | ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಿ: ಬೃಂದಾ ಕಾರಟ್

ಮಂಗಳೂರು | ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಿ: ಬೃಂದಾ ಕಾರಟ್

ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳ ಪತ್ತೆಗಾಗಿ ಎಸ್ ಐಟಿ ರಚಿಸುವಂತೆ ಸಿಪಿಎಂ ನಾಯಕಿ, ಮಾಜಿ ಸಂಸದೆ ಬೃಂದಾ ಕಾರಟ್ ಆಗ್ರಹಿಸಿದ್ದಾರೆ.

ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ವಿನಾಯಕ ಬಾಳಿಗಾ ಮನೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಮಾತನಾಡಿದ  ಅವರು, ವಿನಾಯಕ ಬಾಳಿಗಾ ಹತ್ಯೆಯಾಗಿ ಆರು ವರ್ಷಗಳೇ ಕಳೆದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ. ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ಆರೋಪಿಗಳು ಆಡಳಿತ ಪಕ್ಷದ ಬೆಂಬಲದಿಂದ ರಕ್ಷಣೆ ಪಡೆಯುತ್ತಿದ್ದಾರೆ. ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳಿಗಳ ಪತ್ತೆಗಾಗಿ ಪ್ರಕರಣದ ಸಮಗ್ರ ತನಿಖೆಗೆ ಎಸ್ ಐಟಿ ರಚಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

Join Whatsapp
Exit mobile version