ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ SIT

Prasthutha|

ಬೆಂಗಳೂರು: ಹೆಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(ಎಸ್ಐಟಿ) ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

- Advertisement -

ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತೆಯ ಹೇಳಿಕೆ, ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.

Join Whatsapp