ಭವಾನಿ ರೇವಣ್ಣಗೆ ಎಸ್ ಐಟಿಯಿಂದ ಮತ್ತೊಂದು ನೋಟಿಸ್

Prasthutha|

ಹಾಸನ: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಮತ್ತೊಂದು ನೋಟಿಸ್ ನೀಡಿದೆ.

- Advertisement -

15-05-24 ರಂದು ನೀಡಿದ ನೋಟಿಸ್ ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಆದರೆ ಈ ಹಿಂದೆ ನೀಡಿದ್ದ ನೋಟಿಸ್ ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನೀವು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ. ಆದ್ದರಿಂದ ಜೂ.1 ರಂದು ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕೆಂದು ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.



Join Whatsapp