ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ.
ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್ ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್ ಡ್ರೈವ್ ಗಳನ್ನು ಎಸ್ ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನೀಡಿದೆ.