ಹೊಳೆನರಸೀಪುರ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ, ಶನಿವಾರ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.
ಡಿವೈಎಸ್ ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಐದು ವಾಹನಗಳಲ್ಲಿ ಬಂದ ಎಸ್ ಐಟಿ ತಂಡದ ಜೊತೆ ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರು ಇದ್ದರು.
ಮನೆಯ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಎಸ್ ಐಟಿ ತಂಡ ಎರಡು ಗಂಟೆಗಳಿಂದ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದೆ.