Home ಟಾಪ್ ಸುದ್ದಿಗಳು ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರಿಗೆ ಅನುಮೋದನೆ

ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರಿಗೆ ಅನುಮೋದನೆ

ಬೆಂಗಳೂರು: ವಿಧಾನಪರಿಷತ್ ಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶನಿವಾರ ಅನುಮೋದನೆ ನೀಡಿದ್ದಾರೆ.


ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರುಗಳಿಗೆ ರಾಜ್ಯಪಾಲರ ಮುದ್ರೆ ಬಿದ್ದಿದೆ.


ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ ಹಾಗೂ ಸಮಾಜಸೇವೆ ಕೋಟಾದಡಿ ನಿವೃತ್ತ ಇ.ಡಿ. ಅಧಿಕಾರಿ ಸುಧಾಮ ದಾಸ್ ಅವರನ್ನು ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಪಕ್ಷ ಹೆಸರನ್ನು ಅಂತಿಮಗೊಳಿಸಿತ್ತು.


ಉಮಾಶ್ರೀ ಹೊರತಾಗಿ ಎಂ.ಆರ್.ಸೀತಾರಾಮ್ ಹಾಗೂ ಸುಧಾಮದಾಸ್ ಅವರ ಆಯ್ಕೆಗೆ ಕಾಂಗ್ರೆಸ್ ನಲ್ಲೇ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳೇ ಇವರಿಬ್ಬರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ, ಹೈಕಮಾಂಡ್ ಗೆ ಪತ್ರ ಕೂಡಾ ಬರೆದಿದ್ದಾರೆ ಎನ್ನಲಾಗಿದೆ.

Join Whatsapp
Exit mobile version