ಸ್ವಾತಿ ಮೇಲೆ ಹಲ್ಲೆ: ಕ್ಷಮೆ ಕೇಳಲು ಕೇಜ್ರಿವಾಲ್ ಗೆ ಸೀತಾರಾಮನ್ ಆಗ್ರಹ

Prasthutha|

ನವದೆಹಲಿ: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

- Advertisement -


ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಇದುವರೆಗೆ ಕೇಜ್ರಿವಾಲ್ ಅವರು ಬಾಯಿ ತೆರೆದಿಲ್ಲ. ಈ ವಿಷಯದಲ್ಲಿ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.


ಎಎಪಿ ಮಹಿಳಾ ವಿರೋಧಿ ಪಕ್ಷ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದು ಅವರು ಹರಿಹಾಯ್ದಿದ್ದಾರೆ.



Join Whatsapp