Home ಟಾಪ್ ಸುದ್ದಿಗಳು ಸ್ವಾತಿ ಮೇಲೆ ಹಲ್ಲೆ: ಕ್ಷಮೆ ಕೇಳಲು ಕೇಜ್ರಿವಾಲ್ ಗೆ ಸೀತಾರಾಮನ್ ಆಗ್ರಹ

ಸ್ವಾತಿ ಮೇಲೆ ಹಲ್ಲೆ: ಕ್ಷಮೆ ಕೇಳಲು ಕೇಜ್ರಿವಾಲ್ ಗೆ ಸೀತಾರಾಮನ್ ಆಗ್ರಹ

ನವದೆಹಲಿ: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಇದುವರೆಗೆ ಕೇಜ್ರಿವಾಲ್ ಅವರು ಬಾಯಿ ತೆರೆದಿಲ್ಲ. ಈ ವಿಷಯದಲ್ಲಿ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.


ಎಎಪಿ ಮಹಿಳಾ ವಿರೋಧಿ ಪಕ್ಷ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದು ಅವರು ಹರಿಹಾಯ್ದಿದ್ದಾರೆ.

Join Whatsapp
Exit mobile version