ಪಶ್ಚಿಮ ಬಂಗಾಳ | ಬಾಂಬ್ ಸ್ಫೋಟದಲ್ಲಿ 6 ಮಂದಿ ಗಂಭೀರ

Prasthutha|

- Advertisement -

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಾಂಬೊಂದು ಸ್ಫೋಟಗೊಂಡು ಕನಿಷ್ಟ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇಲ್ಲಿನ ಗೊಸಾಬಾ ಪ್ರದೇಶದ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ಬಾಂಬುಗಳನ್ನು ತಯಾರಿಸುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಗೊಂಡ ಮನೆ ಮತ್ತು ಮಾಲೀಕ ಒಂದು ರಾಜಕೀಯ ಪಕ್ಷಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ಕ್ಯಾನಿಂಗ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಪೊಲೀಸರು ದೂರು ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Join Whatsapp