ಜೀಪಿಗೆ ಟ್ರಕ್ ಡಿಕ್ಕಿ: ಆರು ಮಂದಿ ಮೃತ್ಯು

Prasthutha|

ಥಾಣೆ: ಕಂಟೈನರ್ ಟ್ರಕ್ ಜೀಪ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ನಡೆದಿದೆ.

- Advertisement -

ಕೆಲವು ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪದ್ಘಾದಿಂದ ಖಡವಾಲಿ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ನಂತರ ಜೀಪ್ ಸುಮಾರು 100 ಮೀಟರ್ ಸ್ಕಿಡ್ ಆಗಿ ತಿರುಗಿತು ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಿವಂಡಿ ತಾಲೂಕಿನ ಪಾದ್ಘಾ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಬೆಳಗ್ಗೆ 6.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪದ್ಘಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp