Home ಟಾಪ್ ಸುದ್ದಿಗಳು ಸೊಳ್ಳೆ ಕಾಯಿಲ್’ನಿಂದ ಉಸಿರುಗಟ್ಟಿ ಒಂದೇ ಕುಟುಂಬದ 6 ಮಂದಿ ಸಾವು

ಸೊಳ್ಳೆ ಕಾಯಿಲ್’ನಿಂದ ಉಸಿರುಗಟ್ಟಿ ಒಂದೇ ಕುಟುಂಬದ 6 ಮಂದಿ ಸಾವು

ನವದೆಹಲಿ: ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ನಡೆದಿದೆ.


ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.


ಘಟನೆ ನಡೆದಾಗ ಮನೆಯಲ್ಲಿ ಒಟ್ಟು ಎಂಟು ಮಂದಿ ಸದಸ್ಯರಿದ್ದು, ಇದರಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version