ಆರು ಜನರ ಕೈಕಾಲು ಕಟ್ಟಿ ಮನೆಯಲ್ಲಿದ್ದ 1. ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

Prasthutha|

ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ನಿರತರಾಗಿರುವುದನ್ನು ಅರಿತು, ಮನೆಯಲ್ಲಿದ್ದ ಆರು ಜನರ ಕೈಕಾಲು ಕಟ್ಟಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.

- Advertisement -


ಬುಕ್ ಡಿಪೋ ಮಾಲೀಕ ಉಲ್ಲಾಸ್ ದೊಡ್ಡಮನಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ದರೋಡೆಕೋರರು ಕಿಟಕಿಯ ಸರಳುಗಳನ್ನು ಕತ್ತರಿಸಿ ಮನೆ ಒಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದಾರೆ. ಸುಮಾರು 8 ಜನ ದರೋಡೆಕೋರರ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Join Whatsapp