Home ಟಾಪ್ ಸುದ್ದಿಗಳು ಆರು ಜನರ ಕೈಕಾಲು ಕಟ್ಟಿ ಮನೆಯಲ್ಲಿದ್ದ 1. ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಆರು ಜನರ ಕೈಕಾಲು ಕಟ್ಟಿ ಮನೆಯಲ್ಲಿದ್ದ 1. ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ನಿರತರಾಗಿರುವುದನ್ನು ಅರಿತು, ಮನೆಯಲ್ಲಿದ್ದ ಆರು ಜನರ ಕೈಕಾಲು ಕಟ್ಟಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.


ಬುಕ್ ಡಿಪೋ ಮಾಲೀಕ ಉಲ್ಲಾಸ್ ದೊಡ್ಡಮನಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ದರೋಡೆಕೋರರು ಕಿಟಕಿಯ ಸರಳುಗಳನ್ನು ಕತ್ತರಿಸಿ ಮನೆ ಒಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದಾರೆ. ಸುಮಾರು 8 ಜನ ದರೋಡೆಕೋರರ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version