ತಿರುವನಂತಪುರಂ: SDPI ರಾಜ್ಯ ಕಾರ್ಯದರ್ಶಿ ಕೆ.ಎಸ್. ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಹದಿನಾರು ಆರೋಪಿಗಳನ್ನು ಗುರುತಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಳಪುಝ ಪೊಲೀಸ್ ವರಿಷ್ಠಾಧಿಕಾರಿ ಜಿ. ಜಯದೇವ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯ ಪ್ರತಿಕ್ರಿಯಿಸಿದ ಅವರು, ಈ ಹತ್ಯೆ ಹಿಂದಿರುವ ವ್ಯವಸ್ಥಿತ ಪಿತೂರಿಯನ್ನು ಪರಿಶೀಲಿಸಬೇಕಾಗಿದೆ ಮತ್ತು ಇತರ ಪಾಲ್ಗೊಳ್ಳುವಿಕೆಯನ್ನು ಪತ್ತೆ ಹಚ್ಚಬೇಕಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪುರಾವೆ ಮತ್ತು ಹೇಳಿಕೆಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದರು.
ಪ್ರಾಥಮಿಕ ತನಿಖೆಯ ವೇಳೆ ಏಳು ಜನರನ್ನು ಬಂಧಿಸಿರುವುದು ಪೊಲೀಸ್ ಇಲಾಖೆಯ ದೊಡ್ಡ ಸಾಧನೆಯಾಗಿದೆ. ಇನ್ನೂ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಸಾಂದರ್ಭಿಕವಾಗಿ ತಿಳಿಸಿದರು.
ಕೆ.ಎಸ್. ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮತ್ತೆ ಏಳು ಮಂದಿಯನ್ನು ಬಂಧಿಸಿದ್ದರು. ಇದರೊಂದಿಗೆ ಈ ಹತ್ಯೆಯಲ್ಲಿ ಪಾಲ್ಗೊಂಡ 10 ಮಂದಿ ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ರಾತ್ರಿ ಶಾನ್ ಅವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಆಗಮಿಸಿದ ತಂಡವೊಂದು ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿತ್ತು. ಈ ದಾಳಿಯ ಹಿಂದೆ ಆರೆಸ್ಸೆಸ್ ಕಾರ್ಯಕರ್ತರ ಕೈವಾಡವಿದೆ ಎಂದು SDPI ಆರೋಪಿಸಿತ್ತು.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News