ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಜಾಮೀನು

Prasthutha|

ಬೆಂಗಳೂರು: ಪೋಕ್ಸೋ  ಹಾಗೂ ಎಸ್ಸಿ-ಎಸ್ಟಿ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮಿಯ ವಿರುದ್ಧ ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

- Advertisement -

ಎಸ್.ಕೆ. ಬಸವರಾಜನ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ  ಹೈಕೋರ್ಟ್  ರಜಾ ಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್.ರಾಚಯ್ಯ  ಅವರು ಈ ಆದೇಶ ನೀಡಿದ್ದಾರೆ.

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಸವಪ್ರಭು ಸ್ವಾಮೀಜಿ, ಎಸ್.ಕೆ.ಬಸವರಾಜನ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನ್ ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Join Whatsapp
Exit mobile version