ಮಂಗಳೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಹಲ್ಲೆಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆ SKSSF ಕ್ಯಾಂಪನ್ ವಿಭಾಗ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತ್ತು.
ಈ ಪ್ರತಿಭಟನಾ ಸಭೆಯನ್ನುದ್ದೇಶಿ ಮಾತನಾಡಿದ SKSSF ಬಂಟ್ವಾಳ ಯುನಿಟ್ ಉಪಾಧ್ಯಕ್ಷ ಸವಾಝ್ ಬಂಟ್ವಾಳ, ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ. ಮಾತ್ರವಲ್ಲ ಘಟನೆಯ ಹಿಂದಿರುವ ಕಾಣದ ಕೈಗಳ ಕೈವಾಡವನ್ನು ಬಯಲಿಗೆಳೆಯಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.