Home ಟಾಪ್ ಸುದ್ದಿಗಳು ಹಲವು ಬಾರಿ ಕಪಾಳಕ್ಕೆ ಹೊಡೆದು, ಕಾಲಿನಿಂದ ಒದ್ದಿದ್ದಾರೆ: ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

ಹಲವು ಬಾರಿ ಕಪಾಳಕ್ಕೆ ಹೊಡೆದು, ಕಾಲಿನಿಂದ ಒದ್ದಿದ್ದಾರೆ: ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಹಲವು ಬಾರಿ ನನ್ನ ಕೆನ್ನೆಗೆ ಹೊಡೆದು, ಕಾಲಿನಿಂದ ಒದ್ದಿದ್ದಾರೆ. ಸಹಾಯಕ್ಕಾಗಿ ಜೋರಾಗಿ ಕೂಗಿದರೂ ಕರುಣೆ ತೋರಲಿಲ್ಲ ಎಂದು ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಎಫ್ ಐಆರ್ ನಲ್ಲಿ ಉಲ್ಲೇಖಿಸಿದ್ದಾರೆ.

ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ನಡೆದಿದೆ ಎನ್ನಲಾದ ಹಲ್ಲೆ ಕುರಿತಂತೆ ಶುಕ್ರವಾರ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ಗುರುವಾರವೇ ಎಫ್ಐಆರ್ ದಾಖಲಿಸಿದ್ದು, ವಿಭವ್ ಕುಮಾರ್ ಅನ್ನು ಆರೋಪಿ ಎಂದು ಉಲ್ಲೇಖಿಸಿದ್ದಾರೆ. ಸಹಾಯಕ್ಕಾಗಿ ಕೂಗಿಕೊಂಡರೂ ಕರುಣೆ ತೋರದ ಬಿಭವ್ ಕುಮಾರ್, ಮಾಲಿವಾಲ್ ಅವರ ಎದೆ, ಹೊಟ್ಟೆ ಮತ್ತು ದೇಹದ ಕೆಳಭಾಗಕ್ಕೆ ಒದ್ದಿದ್ದಾನೆ ಎಂದೂ ಉಲ್ಲೇಖಿಸಲಾಗಿದೆ.

Join Whatsapp
Exit mobile version