ಮಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್ ಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು.
ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.