ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ ಪ್ರಕರಣ | PFI ಕೇರಳ ರಾಜ್ಯ ಮುಖಂಡ ಕೆ.ಎಚ್. ನಾಸರ್ ಬಂಧನ

Prasthutha|

ಆಲಪ್ಪುಳ: ಬಾಲಕನೊಬ್ಬ ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ PFI ಕೇರಳ ರಾಜ್ಯ ಸಮಿತಿಯ ಕೋಶಾಧಿಕಾರಿ ಕೆ.ಎಚ್. ನಾಸರ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

- Advertisement -

ಘಟನೆಗೆ ಕುರಿತು ಪ್ರತಿಕ್ರಿಯಿಸಿದ PFI ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಅಬ್ದುಲ್ ಸತ್ತಾರ್, ಸಿಪಿಐಎಂ ನಿಯಂತ್ರಣದಲ್ಲಿರುವ ಕೇರಳ ಪೊಲೀಸರು ಪಾಪ್ಯುಲರ್ ಫ್ರಂಟ್ ಅನ್ನು ಬೇಟೆಯಾಡುವ ಮೂಲಕ ಬಿಜೆಪಿ ಸರ್ಕಾರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡೆ ಅಪಾಯಕಾರಿಯಾಗಿದ್ದು, ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಇದರ ವಿರುದ್ಧ ಸಾರ್ವಜನಿಕರು ಎಚ್ಚೆತ್ತುಕೊಂಡು ಪ್ರತಿಭಟಿಸಬೇಕೆಂದು ಒತ್ತಾಯಿಸಿದ್ದಾರೆ.

Join Whatsapp