Home ಟಾಪ್ ಸುದ್ದಿಗಳು ಸ್ಲೋವಾಕಿಯಾ ಪ್ರಧಾನಿ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಗಂಭೀರ

ಸ್ಲೋವಾಕಿಯಾ ಪ್ರಧಾನಿ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಗಂಭೀರ

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ನಗರದಲ್ಲಿ ಘಟನೆ ನಡೆದಿದೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದೂ ವರದಿಗಳು ತಿಳಿಸಿವೆ.

ಹಲವಾರು ಗುಂಡಿನ ಶಬ್ದಗಳು ಕೇಳಿಬಂದವು. ಗುಂಡು ಹಾರಿಸಿದ ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕ್ರೂರ ದಾಳಿಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಸಪುಟೋವಾ ಹೇಳಿದ್ದಾರೆ ಎಂದೂ ವರದಿಯಾಗಿವೆ.

ರಷ್ಯಾದ ಪರ ಪ್ರಧಾನಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದ ಹೌಸ್ ಆಫ್ ಕಲ್ಚರ್ ಹೊರಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಘಟನೆಯ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.

Join Whatsapp
Exit mobile version