ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶದ ಟ್ರೆಂಡ್ ಗಳನ್ನು ಚುನಾವಣಾ ಆಯೋಗವು ನಿಧಾನಗತಿಯಲ್ಲಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಹಳೆಯ ಮತ್ತು ತಪ್ಪು ಮಾಹಿತಿ ಹಂಚಿಕೊಳ್ಳುವ ಮೂಲಕ ಆಡಳಿತದ ಮೇಲೆ ಬಿಜೆಪಿ ಒತ್ತಡವನ್ನು ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದೆಯೇ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಲೋಕಸಭೆ ಚುನಾವಣೆಯಂತೆ, ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಹರಿಯಾಣದ ಫಲಿತಾಂಶ ಟ್ರೆಂಡ್ ನಿಧಾನಗತಿಯಲ್ಲಿ ಅಪ್ ಲೋಡ್ ಮಾಡಲಾಗುತ್ತಿದೆ. ಹಳೆಯ ಮತ್ತು ತಪ್ಪು ಮಾಹಿತಿ ಹಂಚಿಕೊಳ್ಳುವ ಮೂಲಕ ಬಿಜೆಪಿ ಆಡಳಿತದ ಮೇಲೆ ಒತ್ತಡವನ್ನು ಹೆಚ್ಚಿಸಲು ಯತ್ನಿಸುತ್ತದೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.