ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯ ಚೇತರಿಕೆಯಾಗಿದೆ. ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

- Advertisement -

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

- Advertisement -