ವಾಸನೆ ಮತ್ತು ರುಚಿಯ ನಷ್ಟ ಒಮಿಕ್ರಾನ್ ಸೋಂಕಿತರಲ್ಲಿ ಕಂಡುಬಂದಿಲ್ಲ: ಐಎಂಎ

Prasthutha: December 31, 2021

ನವದೆಹಲಿ:  ರುಚಿ ಮತ್ತು ವಾಸನೆಯ ನಷ್ಟವು ಕೊರೋನಾದ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳಲ್ಲಿ ವರದಿಯಾಗುತ್ತಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಒಮಿಕ್ರಾನ್ ರೂಪಾಂತರವನ್ನು ಲಘುವಾಗಿ ಪರಿಗಣಿಸಬಾರದು ಎಂದು ಭಾರತೀಯ ವೈದ್ಯಕೀಯ ಸಂಘ-ಮಹಾರಾಷ್ಟ್ರ ರಾಜ್ಯ ವಿಭಾಗದ ತಜ್ಞರು ಸ್ಪಷ್ಟವಾಗಿ ಹೇಳಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ, ವೈರಸ್ ತನ್ನ ಗುಣವನ್ನು ಬದಲಾಯಿಸುತ್ತದೆ. ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಾಗ ವೈದ್ಯರನ್ನು ಸಂಪರ್ಕಿಸಬೇಕು ಮತ್ತು ಸ್ವಯಂ-ಔಷಧೋಪಾರದಲ್ಲಿ ತೊಡಗಬಾರದು. ಮಾಸ್ಕ್ ಧರಿಸುವುದು ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಇದಲ್ಲದೆ, ಲಸಿಕೆ ಪಡೆಯದವರು ಕೂಡಲೇ ಲಸಿಕೆ ತೆಗೆದುಕೊಳ್ಳಬೇಕುಎಂದು ಐಎಂಎ-ಎಂಎಸ್ ಅಧ್ಯಕ್ಷ ಡಾ ಸುಹಾಸ್ ಪಿಂಗಳೆ ಶುಕ್ರವಾರ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!