ಸ್ಪೈಸ್ ಜೆಟ್ ನಲ್ಲಿ ಹೊಗೆ: ವಿಮಾನ ವಾಪಸ್

Prasthutha|

ನವದೆಹಲಿ: ಜಬಲ್ ಪುರಕ್ಕೆ ಹೊರಟ್ಟಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ವಿಮಾನವು ಮರಳಿದೆ.

- Advertisement -


ಪ್ರಯಾಣಿಕರನ್ನು ಹೊತ್ತು ವಿಮಾನವು 5,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ಕ್ಯಾಬಿನ್ ಒಳಗೆ ಹೊಗೆ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಸದ್ಯ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪೈಸ್ ಜೆಟ್ ಅಧಿಕಾರಿಗಳು ತಿಳಿಸಿದ್ದಾರೆ.


ಕ್ಯಾಬಿನ್ ಒಳಗೆ ಹೊಗೆ ಆವರಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join Whatsapp