ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ

Prasthutha|

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.

- Advertisement -


ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು.


ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡೇಶ್ವರಿ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದರು.

- Advertisement -


ಚಾಮುಂಡಿ ಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.



Join Whatsapp