ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪ್ರತ್ಯಕ್ಷ: ಐವರು ಅಸ್ವಸ್ಥ, 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

Prasthutha|

ಯಾದಗಿರಿ: ವಸತಿ ನಿಲಯದ ಉಪಾಹಾರ ಪಾತ್ರೆಯಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದ್ದು, ಆ ಆಹಾರ ಸೇವಿಸಿದ ಐವರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಅಬ್ಬೆತುಮಕೂರು ಮಠದ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ನಿಲಯದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

- Advertisement -


ರಾಹುಲ್, ಮಲ್ಲಪ್ಪ, ವಿಶ್ವಕರ್ಣ, ಬಸವರಾಜ, ಯುವರಾಜ ಎಂಬ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿಯಿಂದ ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಪಾಸಣೆ: ಉಪಾಹಾರ ಸೇವಿಸಿದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯವನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಮಾತ್ರ ತಲೆ ಸುತ್ತು, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಉಳಿದವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ಮಾಹಿತಿ ನೀಡಿದರು.

Join Whatsapp
Exit mobile version