ಭಾರತ-ದಕ್ಷಿಣ ಆಫ್ರಿಕಾ ತಂಡಗಳ ಟಿ20 ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿದ ಹಾವು !

Prasthutha|

ಗುವಾಹಟಿ: ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದ ವೇಳೆ ಹಾವೊಂದು ಮೈದಾನದಲ್ಲಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು.

- Advertisement -

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌ ನಡೆಸುತ್ತಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ 7 ಓವರ್‌ ಕಳೆಯುವಷ್ಟರಲ್ಲಿ ಭಾರತ ವಿಕೆಟ್‌ ನಷ್ಟವಿಲ್ಲದೆ 68 ರನ್‌ಗಳಿಸಿತ್ತು. ಈ ವೇಳೆ ಮೈದಾನದಲ್ಲಿ ಹಾವೊಂದು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಕೂಡಲೇ ಮೈದಾನದ ಸಿಬ್ಬಂದಿ ಸಲಕರಣೆಯೊಂದಿಗೆ ಆಗಮಿಸಿ ಹಾವನ್ನು ಚೀಲದಲ್ಲಿ ತುಂಬಿ ಕೊಂಡೊಯ್ದರು.

Join Whatsapp