“ಸ್ನೇಹಕೂಟ-22” ಪೊಸ್ಟರ್ ಬಿಡುಗಡೆ ಕಾರ್ಯಕ್ರಮ

Prasthutha|

ರಿಯಾದ್: ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ವರ್ಷಂಪ್ರತಿ ಹಮ್ಮಿಕೊಳ್ಳಲಾಗುತ್ತಿರುವ “ಫ್ರೆಟರ್ನಿಟಿ ಫೆಸ್ಟ್” ಅಂಗವಾಗಿ ಅನಿವಾಸಿ ಭಾರತೀಯರನ್ನು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದು ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ 20 ರಂದು ರಿಯಾದಿನಲ್ಲಿ ನಡೆಯುವ “ಸ್ನೇಹಕೂಟ-22” ಕಾರ್ಯಕ್ರಮದ ಪೊಸ್ಟರ್ ಬಿಡುಗಡೆಯನ್ನು ಹಮ್ಮಿಕೊಳ್ಳಲಾಯಿತು.

- Advertisement -

ಫ್ರೆಟರ್ನಿಟಿ ಫೆಸ್ಟ್ ಹೆಸರಿನಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಸೌದಿ ಅರೇಬಿಯಾದ್ಯಂತ ನಡೆಸಲಾಗುತ್ತಿದೆ.

ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಇಂಡಿಯಾ ಫ್ರೆಟರ್ನಿಟಿ ಫೋರಂ, ರಿಯಾದ್ ನ ಕರ್ನಾಟಕ ಚಾಪ್ಟರ್ ಅಧ್ಯಕ್ಷರಾದ ತಾಜುದ್ದೀನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲಾ ಅನಿವಾಸಿ ಭಾರತೀಯರಿಗೆ ಆಹ್ವಾನ ನೀಡಿದರು. ರಿಯಾದಿನ ಎಕ್ಸಿಟ್ -18 ನಲ್ಲಿರುವ ಸಾ-ಅದಾ ಇಸ್ತಿರಾಹ್ ದಲ್ಲಿ ಅಕ್ಟೋಬರ್ 20 ರಂದು ನಡೆಯಲಿರುವ ಕುಟುಂಬ ಸಮ್ಮಿಲನದಲ್ಲಿ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳು ಸಾರ್ವಜನಿಕ ಭಾಷಣ, ಕ್ರೀಡೆ, ರಸಪ್ರಶ್ನೆ ಮತ್ತು ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಲಿರುವುದು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ, ರಿಯಾದ್ ಕರ್ನಾಟಕ ಚಾಪ್ಟರ್ ಪ್ರಧಾನ ಕಾರ್ಯದರ್ಶಿಯಾದ ಮುಹಮ್ಮದ್ ನವೀದ್, ಕರ್ನಾಟಕ ಚಾಪ್ಟರ್ ರಾಜ್ಯ ಸಮಿತಿ ಸದಸ್ಯರಾದ ಸಾಬಿತ್ ಹಸನ್, ಮುಹಮ್ಮದ್ ಶರೀಫ್, ನಿಝಾಮುದ್ದೀನ್ ಉಪಸ್ಥಿತರಿದ್ದರು.

Join Whatsapp