Home ಟಾಪ್ ಸುದ್ದಿಗಳು ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ.


ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಬಂದು ಸ್ನೇಹಮಹಿ ಕೃಷ್ಣ, ಲೋಕಾಯುಕ್ತಕ್ಕೆ ಪತ್ರದ ಮೂಲಕ ಮನವಿ ಸಲ್ಲಿಕೆ ಮಾಡಿದ್ದಾರೆ.


ಅಕ್ಟೋಬರ್ 10ರಂದು ವಾಟ್ಸಪ್ ಮೂಲಕ ಮನವಿ ಮಾಡಿದ್ದ ಸ್ನೇಹಮಯಿ ಕೃಷ್ಣ ಸೋಮವಾರ ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ.


ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ಮುಚ್ಚಿಡುತ್ತಿದ್ದಾರೆ. ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿದ್ದಾರೆ.

Join Whatsapp
Exit mobile version