Home ವಿದೇಶ ಮರಳುಗಾಡು ಸೌದಿ ಅರೇಬಿಯಾದಲ್ಲಿ ಹಿಮಪಾತ, ಮಳೆ..!

ಮರಳುಗಾಡು ಸೌದಿ ಅರೇಬಿಯಾದಲ್ಲಿ ಹಿಮಪಾತ, ಮಳೆ..!

ರಿಯಾದ್: ಸೌದಿ ಅರೇಬಿಯಾ ಎಂದರೆ ಮರಳುಗಾಡು. ಸದಾ ಸುಡುವಷ್ಟು ಬಿಸಿಲಿರುವ ಮರುಭೂಮಿಯಲ್ಲಿ ಈಗ ಹಿಮಪಾತ, ಮಳೆಯ ಅಬ್ಬರ.


ಹವಾಮಾನ ವೈಪರೀತ್ಯದಿಂದಾಗಿ ಸೌದಿ ಅರೇಬಿಯಾದ ಹಲವು ಭಾಗಗಳಲ್ಲಿ ಹಿಮ ಬೀಳುತ್ತಿದೆ. ಕಣ್ಣು ಹಾಯಿಸಿದಷ್ಟು ದೂರ ಕಾಣುತ್ತಿದ್ದ ಮರಳು ಗುಡ್ಡಗಳ ಮೇಲೆ ಹಿಮಗಳ ರಾಶಿ ಬಿದ್ದಿದೆ.


ಅಲ್ –ಜಾವ್ಫ್ ಪ್ರಾಂತ್ಯದ ಉತ್ತರ ಗಡಿಪ್ರದೇಶಗಳಾದ ರಿಯಾದ್, ಮೆಕ್ಕಾ, ಆಸಿರ್, ತಬೂಕ್ ಮತ್ತು ಅಲ್ ಬಹಾಹ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಮತ್ತು ಹಿಮ ಬೀಳುತ್ತಿದೆ.


ಮರುಭೂಮಿಯಲ್ಲಿ ಹಿಮ ಮತ್ತು ಮಳೆಯಾಗುತ್ತಿರುವ ಅಪರೂಪದ ದೃಶ್ಯ ನೋಡಿ ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇದರ ವಿಡಿಯೊ, ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.


ಅರಬ್ಬಿ ಸಮುದ್ರದಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಣಾಮ ಒಮಾನ್ಗೂ ಆವರಿಸಿದೆ. ಇದರಿಂದಾಗಿ ಶುಷ್ಕತೆಯಿಂದ ಇರುವ ಪ್ರದೇಶದಲ್ಲಿ ತೇವಾಂಶದಿಂದ ಕೂಡಿರುವ ಗಾಳಿ ಬೀಸುತ್ತಿದೆ. ಇದು ಸೌದಿ ಅರೇಬಿಯಾ ಮತ್ತು ನೆರೆಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಾದ್ಯಂತ ಗುಡುಗು, ಆಲಿಕಲ್ಲು ಮಳೆ, ಹಿಮ ಬೀಳಲು ಕಾರಣವಾಗಿದೆ ಎಂದು ಯುಎಇಯ ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.

Join Whatsapp
Exit mobile version