ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ: ದೆಹಲಿ ನ್ಯಾಯಾಲಯ

Prasthutha|

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 24 ವರ್ಷಗಳ ಹಿಂದೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ನರ್ಮದಾ ಬಚಾವೋ ಆಂದೋಲನ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಪಾಟ್ಕರ್ ಮತ್ತು ಸಕ್ಸೇನಾ 2000 ರಿಂದ ಕಾನೂನು ಹೋರಾಟದಲ್ಲಿ ತೊಡಗಿದ್ದರು. ಆಗ ಸಕ್ಸೇನಾ ಆಗ ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು.ಮೇಧಾ ಪಾಟ್ಕರ್ ಅವರು ಐಪಿಸಿಯ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾರೆ. ಈ ಮೂಲಕ ಆಕೆಗೆ ಶಿಕ್ಷೆ ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಂಬಂಧಿತ ಕಾನೂನಿನ ಅಡಿಯಲ್ಲಿ, ಪಾಟ್ಕರ್ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ಪಡೆಯುವ ಸಾಧ್ಯತೆ ಇದೆ.

- Advertisement -

ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಪಾಟ್ಕರ್ ವಿರುದ್ಧ ಸಕ್ಸೇನಾ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಕ್ಸೇನಾ ವಿರುದ್ಧದ ಪಾಟ್ಕರ್ ಅವರ ಹೇಳಿಕೆಗಳು ಮಾನಹಾನಿಕರ ಮಾತ್ರವಲ್ಲದೆ ನಕಾರಾತ್ಮಕ ಗ್ರಹಿಕೆಗಳನ್ನು ಪ್ರಚೋದಿಸಿವೆ ಎಂದು ಹೇಳಿದೆ. ಆರೋಪಿ ಮೇಧಾ ಪಾಟ್ಕರ್ ಅವರು ದೂರುದಾರರ ಪ್ರತಿಷ್ಠೆಗೆ ಹಾನಿಯುಂಟುಮಾಡುವ ಉದ್ದೇಶ ಹೇಳಿಕೆಗಳನ್ನು ನೀಡಿರುವುದು ಸಾಬೀತಾಗಿದ ಎಂದು ಕೋರ್ಟ್​ ಹೇಳಿದೆ.

ಸಕ್ಸೇನಾ “ಗುಜರಾತ್‌ನ ಜನರನ್ನು ಮತ್ತು ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನವಿಟ್ಟಿದ್ದಾರೆ” ಎಂದು ಪಾಟ್ಕರ್ ಹೇಳಿಕೆ ನೀಡಿದ್ದರು. ಅವರ ಆರೋಪವು ಸಕ್ಸೇನಾ ಅವರ ಸಾರ್ವಜನಿಕ ಸೇವೆಯ ಮೇಲಿನ ದಾಳಿಯಾಗಿದೆ ಎಂದು ನ್ಯಾಯಾಲಯವು ಉಲ್ಲೇಖಿಸಿದೆ.

Join Whatsapp