ಹರಕೆ, ಕೋಲದಲ್ಲಿ ಭಾಗಿಯಾದ ಬಗ್ಗೆ ಸ್ಪೀಕರ್ ಪ್ರತಿಕ್ರಿಯೆ
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಗೀಚುವವರನ್ನು ಇತಿಹಾಸವು ನೆನಪಿಡಲ್ಲ. ಪ್ರಶ್ನೆ ಕೇಳುವವರನ್ನೂ ಇತಿಹಾಸ ನೆನಪಿಡುವುದಿಲ್ಲ ಎಂದು ಸ್ಪೀಕರ್ ಯು.ಟಿ. ಖಾದರ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧದ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ.
ಹರಕೆ, ಕೋಲದಲ್ಲಿ ಭಾಗಿಯಾದ ಸ್ಪೀಕರ್ ವಿರುದ್ಧ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಂತವರನ್ನೆಲ್ಲ ಇತಿಹಾಸ ನೆನಪಿಗೆ ಇಟ್ಟುಕೊಳ್ಳುವುದಿಲ್ಲ. ಯಾರು ಕೆಲಸ ಮಾಡುತ್ತಾರೋ, ಯಾರು ಉತ್ತರ ಕೊಡ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿಟ್ಟುಕೊಳ್ಳುತ್ತದೆ ಎಂದರು.
ನಮ್ಮ ಪ್ರಾಚೀನ ಆಚರಣೆ ಅನುಗುಣವಾಗಿ ಅವರು ಹರಕೆ ಇಟ್ಟುಕೊಂಡಿದ್ದರು. ಅದಕ್ಕೆ ಹೋಗುವುದು, ಗೌರವ ಕೊಡುವುದು ನಮ್ಮ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಯಾರೋ ಒಬ್ಬ ಗೀಚಿದ್ರೆ, ನೂರು ಜನ ಒಪ್ಪಿಕೊಳ್ಳಲ್ಲ ಎಂದರು.