Home ಕರಾವಳಿ ಸಾಮಾಜಿಕ ಹೊಣೆಗಾರಿಕೆ ಪತ್ರಿಕೋದ್ಯಮದಲ್ಲಿ ಅತಿ ಮುಖ್ಯ: ಡಾ. ರಾಜೇಂದ್ರ ಕೆ.ವಿ.

ಸಾಮಾಜಿಕ ಹೊಣೆಗಾರಿಕೆ ಪತ್ರಿಕೋದ್ಯಮದಲ್ಲಿ ಅತಿ ಮುಖ್ಯ: ಡಾ. ರಾಜೇಂದ್ರ ಕೆ.ವಿ.

ಮಂಗಳೂರು: ಪತ್ರಕರ್ತರು ತನಿಖಾ ವರದಿಗಾರಿಕೆಯೊಂದಿಗೆ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕಾರ್ಯ ನಿರ್ವಹಿಸಿದಾಗ ಸಮಾಜಕ್ಕೆ ದೊರೆಯುವ ಫಲಿತಾಂಶ ಉತ್ತಮವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದಜಿಲ್ಲಾ ಪತ್ರಕರ್ತರ ಸಮ್ಮೇಳನ ‘ಸಾಧನೆ ಸಂಭ್ರಮ-2021’ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ನೆರವೇರಿಸಿ ಮಾತನಾಡಿದರು.
ಎಲ್ಲಾ ರಂಗದಲ್ಲೂ ಭ್ರಷ್ಟಾಚಾರ ಸಾಮಾನ್ಯವಾಗಿದ್ದು ಜನತೆ ಇರಿಸಿಕೊಂಡಿರುವ ನಂಬಿಕೆಯನ್ನು ಉಳಿಸುವ ಜವಾಬ್ದಾರಿ ಮಾಧ್ಯಮ ಮೇಲಿದೆ ಎಂದರು.


ರಾಜ್ಯದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ದ.ಕ ಜಿಲ್ಲೆಯಂತಹ ಕ್ರಿಯಾಶೀಲ ಪತ್ರಕರ್ತ ಬಳಗವನ್ನು ಈವರೆಗೂ ಎಲ್ಲೂ ಕಂಡಿಲ್ಲ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಬಾಲಕೃಷ್ಣ ಪುತ್ತಿಗೆ, ಭಾಸ್ಕರ ರೈ ಬಕಟ್ಟ, ಸಾಂತೂರು ಶ್ರೀನಿವಾಸ ತಂತ್ರಿ, ಕೆ.ಜಾನ್, ಕೆ.ಪಿ. ಮಂಜುನಾಥ್, ಬಿ.ಶಿವಪ್ರಸಾದ್, ವಿದ್ಯಾಧರ್ ಶೆಟ್ಟಿ, ರಘುನಾಥ ಎಂ ವರ್ಕಾಡಿ, ಶಶಿಧರ ರೈ, ಜಾರಪ್ಪ ಪೂಜಾರಿ, ಕೃಷ್ಣ ಬೆಟ್ಟ, ಸತೀಶ್ ಕಲ್ಮಾಡಿ, ರಾಜೇಶ್ ನಾಯ್ಕ್, ಸಿದ್ದೀಕ್ ನೀರಾಜೆ ಅವರನ್ನು ಸನ್ಮಾನಿಸಲಾಯಿತು.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಹಾಗೂ ಇತರ ಗಣ್ಯರು ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಹೃಷಿಕೇಶ್ ಭಗವಾನ್ ಮಾತನಾಡಿ, ದ.ಕ.ಜಿಲ್ಲಾ ಪತ್ರಕರ್ತರು ಸಕ್ರಿಯವಾಗಿರುವುದಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು ಪೊಲೀಸ್ ಉಪ ಆಯುಕ್ತ ಹರಿರಾಂ ಶಂಕರ್ ಮಾತನಾಡಿ, ಮಾಧ್ಯಮ ಮತ್ತು ಪೊಲೀಸರಿಂದ ಸಮಾಜ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಪೊಲೀಸ್ ಇಲಾಖೆ ಸೇರಿದಂತೆ ವ್ಯವಸ್ಥೆ ಯಲ್ಲಿ ತಪ್ಪಾದ ಸಂದರ್ಭ ಎಚ್ಚರಿಸಿ ಚುರುಕು ಮುಟ್ಟಿಸುವ ಕೆಲಸವನ್ನು ಮಂಗಳೂರು ಪತ್ರಕರ್ತರು ಮಾಡುತ್ತಿದ್ದಾರೆ ಎಂದರು.


ಕೆನರಾ ಬ್ಯಾಂಕ್ ನ ಡಿಜಿಎಂ ಯೋಗೀಶ್ ಆಚಾರ್ಯ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ಮಾತನಾಡಿದರು.ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.


ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ನನ್ನ ವೃತ್ತಿ ಜೀವನದ ದೊಡ್ಡ ಗೌರವ ಇದು ಎಂದು ಹೇಳಿದರು.ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.
ಸಂಘದ ಮಾಜಿ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಭಿನಂದನಾ ಭಾಷಣ ಮಾಡಿದರು.
ಆರ್.ಸಿ. ಭಟ್ ಸನ್ಮಾನ ಪತ್ರ ವಾಚಿಸಿದರು. ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಆರಿಫ್ ಪಡುಬಿದ್ರೆ ವಂದಿಸಿದರು

Join Whatsapp
Exit mobile version