ಸಾಫ್ಟ್ ವೇರ್ ಎಂಜಿನಿಯರ್ ಮೇಲೆ 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ

Prasthutha|

ರಾಂಚಿ: 26 ವರ್ಷದ ಸಾಫ್ಟ್ ವೇರ್ ಎಂಜಿನಿಯರ್  ಯುವತಿಯ ಮೇಲೆ ಸುಮಾರು 10 ಜನರು ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ  ನಡೆದಿದೆ.

- Advertisement -

ಯುವತಿಯು ಗುರುವಾರ ಸಂಜೆ ತನ್ನ ಗೆಳೆಯನೊಂದಿಗೆ ಹೊರಗೆ ಹೋಗಿದ್ದಾಗ ಚೈಬಾಸಾದ ಹಳೆಯ ಏರೋಡ್ರೋಮ್ ಬಳಿ ಈ ಘಟನೆ ನಡೆದಿದೆ .

ಸುಮಾರು ಎಂಟು-ಹತ್ತು ಜನರ ಗುಂಪೊಂದು, ಅವರನ್ನು ತಡೆದು , ಗೆಳೆಯನನ್ನು ಥಳಿಸಿ  ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಹಿಳೆ ಪ್ರಸಿದ್ಧ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ . ಅತ್ಯಾಚಾರವೆಸಗಿದ ನಂತರ, ಆರೋಪಿಗಳು ಆಕೆಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಲ್ಲದೆ ಆಕೆಯ ಪರ್ಸ್ ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿರುವವರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.



Join Whatsapp