ಸೂರ್ಯಗ್ರಹಣ: ಅ.25ರಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

Prasthutha|

ಮೈಸೂರು: ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

ದೇವಸ್ಥಾನದ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, “ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಚಾಮುಂಡಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಹೀಗಾಗಿ, ಮಧ್ಯಾಹ್ನ 1 ಗಂಟೆ ನಂತರ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿಗೊಳಿಸಿದೆ” ಎಂದು ತಿಳಿಸಿದ್ದಾರೆ.

ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಾಮುಂಡಿ ಬೆಟ್ಟಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ, ಈ ಬಾರಿ ದೀಪಾವಳಿ ಹಬ್ಬದ ದಿನದಂದೇ ಸೂರ್ಯಗ್ರಹಣ ಇರುವುದರಿಂದ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.



Join Whatsapp