ಬಳ್ಳಾರಿ ನಗರ ಕ್ಷೇತ್ರದಿಂದಲೇ ಸ್ಪರ್ಧೆ: ಸೋಮಶೇಖರ್ ರೆಡ್ಡಿ

Prasthutha|

►ಕುಟುಂಬದೊಳಗೇ ಶುರುವಾಯ್ತು ಜಿದ್ದಾಜಿದ್ದಿ…

- Advertisement -

ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ಜಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.


ಕೆಆರ್ಪಿಪಿ ಪಕ್ಷದಿಂದ ಜನಾರ್ದನ ರೆಡ್ಡಿ ಅವರ ಪತ್ನಿ ಗಾಲಿ ಲಕ್ಷ್ಮೀ ಅರುಣಾ ಅವರು ಬಳ್ಳಾರಿ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಘೋಷಣೆ ಆಗಿರುವ ಹಿನ್ನೆಲೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಳ್ಳಾರಿ ಅವರು, ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಿದರೂ ಕೂಡ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

- Advertisement -


ಬಳ್ಳಾರಿ ನಗರ ಕ್ಷೇತ್ರದಿಂದ ತಮ್ಮ ಸ್ಪರ್ಧೆ ನೂರಕ್ಕೆ ನೂರರಷ್ಟು ಖಚಿತ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುವೆ. ಪಕ್ಷೇತರನಾಗಿ ಗೆದ್ದ ನಂತರ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.

Join Whatsapp