ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದು ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಹೆಚ್ ಆಂಜನೇಯ

Prasthutha|

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಮಾಜಿ ಸಚಿವ ಹೆಚ್.ಆಂಜನೇಯ, ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಆಡಳಿತ ನಡೆಸುತ್ತಿರುವುದನ್ನು ಕೆಲ ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದಲೇ ಅನಗತ್ಯವಾಗಿ ಟೀಕೆ, ಆರೋಪ ಮಾಡಿ ಎದೆಗುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ನಡೆದ ಡಾ.ಬಾಬು ಜಗಜೀವನರಾಮ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನೊಂದವರು, ಬಡವರು, ಶೋಷಿತರು, ಅಹಿಂದ ವರ್ಗದ ಪ್ರಗತಿಗೆ ಯೋಜನೆಗಳನ್ನು ರೂಪಿಸಿರುವ ಕಾರಣಕ್ಕೆ ಹಾಗೂ ಎಲ್ಲ ವರ್ಗದ ಜನರು ಮೆಚ್ಚಿಕೊಳ್ಳುವ ರೀತಿ ಮಾದರಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಕುರಿತು ಕೆಲವರಲ್ಲಿ ಸಹಜವಾಗಿ ಅಸೂಯೆ ಉಂಟಾಗಿದೆ. ಆದ್ದರಿಂದ ಸುಳ್ಳು ಆರೋಪ ಮಾಡುವಲ್ಲಿ ಕೆಲ ದುಷ್ಟ ಶಕ್ತಿಗಳು ನಿರತವಾಗಿವೆ ಎಂದು ಹೇಳಿದರು.

ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ ಸಮುದಾಯ ಅವರೊಟ್ಟಿಗೆ ನಿಲ್ಲಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

- Advertisement -

ಐದು ವರ್ಷಗಳ ಕಾಲ ನನ್ನನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಖಾತೆ ಸಚಿವರಾಗಿ ಸ್ವತಂತ್ರವಾಗಿ ಕಾರ್ಯನಿರ್ಹಿಸಲು ಅವಕಾಶ ಕೊಟ್ಟಿದ್ದ ಸಿದ್ದರಾಮಯ್ಯ ಅವರ 2013-18 ಆಡಳಿತ ದಲಿತರ ಪಾಲಿಗೆ ಸುವರ್ಣ ಯುಗವಾಗಿತ್ತು. ಸಚಿವನಾಗಿ ಹಾಸ್ಟೆಲ್ ನಿರ್ಮಾಣ ಸೇರಿ ನೂರಾರು ಜನಪರ ಕೆಲಸ ಮಾಡಿದ್ದೇನೆ. ಮುಖ್ಯವಾಗಿ ಡಾ.ಬಾಬು ಜಗಜೀವನರಾಮ್ ಭವನ ಇಡೀ ದೇಶವೇ ಇತ್ತ ತಿರುಗಿ ನೋಡುವ ರೀತಿ ನಿರ್ಮಾಣ ಮಾಡಲು ಶ್ರಮಿಸಿದ್ದೇನೆ. ಇದಕ್ಕೆಲ್ಲ ಬೆಂಬಲವಾಗಿ ನಿಂತಹವರು ಸಿದ್ದರಾಮಯ್ಯ ಎಂದು ಹೇಳಿದರು.

ಹೆಚ್ ಆಂಜನೇಯ 2013-14 ರಿಂದ 2018-19 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು



Join Whatsapp