ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ: ರೇಣುಕಾಚಾರ್ಯ ವಾಗ್ದಾಳಿ

Prasthutha|

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

- Advertisement -


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.


ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗ್ತಿದೆ ಎಂದರು.

Join Whatsapp