ಹಾಸನ: ಊಟಕ್ಕೆ ವಿಷ ಬೆರೆಸಿ ತಂದೆ ಹಾಗೂ ತಾಯಿಯನ್ನು ಮಗನೇ ಹತ್ಯೆಗೈದ ಘಟನೆ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ.
ಮಂಜುನಾಥ್ (27) ವಿಷ ಬೆರಸಿ ತಂದೆ ತಾಯಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ವಿಧವೆ ಒಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿಗೆ ತಂದೆ-ತಾಯಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಸಹಕಾರ ಸಂಘಗಳಲ್ಲಿ ಆತನ ತಾಯಿ ಉಮಾ (48)ಮಾಡಿದ್ದ ಸಾಲದ ಹಣವನ್ನು ಆರೋಪಿ ದುರುಪಯೋಗ ಪಡಿಸಿಕೊಂಡಿದ್ದ. ಹಣವನ್ನು ವಾಪಸ್ ಕೇಳಿದ್ದಕ್ಕೂ ಆರೋಪಿ ಪೋಷಕರ ಮೇಲೆ ಸಿಟ್ಟಾಗಿದ್ದ. ಇದರಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ಅದರಂತೆ ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ ಹಾಗೂ ತಾಯಿಯನ್ನು ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.