ವಿಮೆಯ ಹಣ ಪಡೆಯಲು ತಂದೆಯನ್ನೇ ಸುಪಾರಿ ಕೊಟ್ಟು ಕೊಲ್ಲಿಸಿದ ಮಗ

Prasthutha|

ಭೋಪಾಲ್: ಆಕ್ಸಿಡೆಂಟಲ್ ವಿಮೆ ಹಣವನ್ನು ಪಡೆಯಲು ವ್ಯಕ್ತಿಯೊಬ್ಬ ತನ್ನ ತಂದೆಯನ್ನೇ ಹಂತಕರಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಡೆದಿದೆ. 

- Advertisement -

ಆರೋಪಿಯನ್ನು ಕರಣ್ ಶಿಂಧೆ ಎಂದು ಗುರುತಿಸಲಾಗಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದು ತನ್ನ 52 ವರ್ಷದ ತಂದೆ ಮೃತಪಟ್ಟಿದ್ದಾರೆ ಎಂದು ಸೆಂಧ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿದ ಪೊಲೀಸರಿಗೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತರಿಗೆ ಡಿಕ್ಕಿ ಹೊಡೆದ ವಾಹನವು ಅದೇ ಸ್ಥಳದಲ್ಲಿ ಸುತ್ತುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಯಾದವ್ ಹೇಳಿದ್ದಾರೆ.

ತನಿಖೆಯ ನಂತರ ಶಿಂಧೆಯನ್ನು ಪುಣೆಯಲ್ಲಿ ಬಂಧಿಸಲಾಗಿದ್ದು, ತನ್ನ ತಂದೆಗೆ 10 ಲಕ್ಷ ರೂಪಾಯಿಯ ಆಕ್ಸಿಡೆಂಟಲ್ ವಿಮೆ ಮಾಡಿಸಿ ಕೊಲೆಗಾರನನ್ನು ನೇಮಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅಪರಾಧದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ



Join Whatsapp