ತಂದೆ-ತಾಯಿ ಮೇಲೆ ಹಲ್ಲೆ ನಡೆಸಿದ ಮಗನಿಗೆ 5 ವರ್ಷ ಜೈಲು, 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

Prasthutha: December 21, 2021

ಬಿಹಾರ: ಕುಡಿದ ಮತ್ತಿನಲ್ಲಿ ತಂದೆ ತಾಯಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಅವರ ಕೈಯಲ್ಲಿದ್ದ ಹಣವನ್ನು ಕಸಿದುಕೊಂಡು ಹೋಗಿದ್ದ ಮಗನಿಗೆ ಬಿಹಾರದ ನ್ಯಾಯಾಲಯವೊಂದು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಜೊತೆಗೆ 1 ಲಕ್ಷ ದಂಡವನ್ನು ಪಾವತಿಸುವಂತೆ ಆದೇಶಿಸಿದೆ.

ಆದಿತ್ಯರಾಜ್ ಎಂಬಾತನ ವಿರುದ್ಧ ಸ್ವತಃ ಆತನ ತಾಯಿ ಕಳೆದ ಜೂನ್’ನಲ್ಲಿ ದೂರು ನೀಡಿದ್ದು, ವಿಚಾರಣೆಯ ವೇಳೆ ಅರಾ ನ್ಯಾಯಾಲಯದಲ್ಲಿ ಹಾಜರಾಗಿ ಸಾಕ್ಷಿ ನುಡಿದಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಕುಮಾರ್ ಹೇಳಿದ್ದಾರೆ. 2016ರಲ್ಲಿ ಬಿಹಾರದಲ್ಲಿ ಮದ್ಯದ ಮೇಲೆ ನಿಷೇಧ ಹೇರಲಾದ ಬಳಿಕ ಈ ವಿಚಾರದಲ್ಲಿ ರಾಜ್ಯದ ನ್ಯಾಯಾಲಯವೊಂದು ನೀಡುತ್ತಿರುವ ಪ್ರಮುಖ ತೀರ್ಪು ಇದಾಗಿದೆ.

ತೀವ್ರ ಕುಡಿತದ ಹಾಗೂ ಮಾದಕದ್ರವ್ಯ ವ್ಯಸನಿಯಾಗಿದ್ದ ಪುತ್ರ ಆದಿತ್ಯರಾಜ್’ನನ್ನು ಸರಿದಾರಿಗೆ ತರಲು ತಾಯಿ ಬಹಳಷ್ಟು ಶ್ರಮ ಪಟ್ಟಿದ್ದರೂ ಫಲ ಕೊಟ್ಟಿರಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದಿತ್ಯರಾಜ್ ವಿರುದ್ಧ ಮೂವರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿದಿದ್ದರು. ಆದರೆ ಆತನ ಪರವಾಗಿ ಯಾರೊಬ್ಬರೂ ಹಾಜರಾಗಲಿಲ್ಲ, ಆತನ ಸ್ನೇಹಿತರೂ ಸಾಥ್ ಕೊಡಲಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!