Home ಟಾಪ್ ಸುದ್ದಿಗಳು ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸೋನಿಯಾ ಮತ್ತು ಖರ್ಗೆಗೆ ಆಹ್ವಾನ

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸೋನಿಯಾ ಮತ್ತು ಖರ್ಗೆಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ನಿಯೋಗವೊಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿಗೆ ಖುದ್ದು ಆಹ್ವಾನ ನೀಡಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಸಂದರ್ಶಕರನ್ನು ಭೇಟಿ ಮಾಡುತ್ತಿಲ್ಲ. ಈ ಕಾರಣ ಅವರಿಗೆ ಆಹ್ವಾನವನ್ನು ತಲುಪಿಸಲಾಗಿದೆ.

ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಟ್ರಸ್ಟ್‌ನ ಪದನಿಮಿತ್ತ ಸದಸ್ಯ, ಆರ್‌ಎಸ್‌ಎಸ್ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ರಾಮ್ ಲಾಲ್ ಮತ್ತು ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಸೋನಿಯಾ ಗಾಂಧಿ ಮತ್ತು ಖರ್ಗೆ ಅವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಯೋಗವು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಲ್ಲದೆ, ಎಲ್ಲ ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version