ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ತನ್ನ ಎದುರು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ, ಸಂಸದ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಅಭಿಷೇಕ ಮನು ಸಿಂಘ್ವಿ, ಅಗತ್ಯವಿದ್ದಲ್ಲಿ ಇಡಿ ಇಲಾಖೆ ತಿಳಿಸಿದ ದಿನಾಂಕದಂದು ಸೋನಿಯಾ ಗಾಂಧಿ ಅವರು ವಿಚಾರಣೆಗೆ ಹಾಜರಾಗುತ್ತಾರೆ. ಆದರೆ ರಾಹುಲ್ ಗಾಂಧಿ ಅವರಿಗೆ ಕೆಲವು ಸಮಯಾವಕಾಶ ನೀಡುವಂತೆ ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದಿದೆ. ಅಕ್ರಮ ಹಣ ವರ್ಗಾವಣೆಯ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಅವರು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಇ.ಡಿ. ಇಲಾಖೆ ವಿಚಾರಣೆಗೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಹಾಜರಾಗಲು ನಿರ್ಧರಿಸಿದ್ದಾರೆ ಮತ್ತು ವಿಳಂಬ ಮಾಡುವುದಿಲ್ಲ ಅಥವಾ ಮುಂದೂಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.