Home ಟಾಪ್ ಸುದ್ದಿಗಳು ಇ.ಡಿ. ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ಇ.ಡಿ. ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಇ.ಡಿ.ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳಗ್ಗೆ ತಮ್ಮ ನಿವಾಸದಿಂದ ಕಾಂಗ್ರೆಸ್ ನಾಯಕರೊಂದಿಗೆ ಆಗಮಿಸಿದ ಸೋನಿಯಾ ನೇರವಾಗಿ ಇ.ಡಿ.ಕಚೇರಿಗೆ ಹಾಜರಾದರು.

ಸೋನಿಯಾ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಮಹಿಳಾ ಅಧಿಕಾರಿಯ ಸಮ್ಮುಖದಲ್ಲಿ ಇಡೀ ದಿನ ಇಡಿ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

“ಮೋದಿ ಸರ್ಕಾರವು ವಿವಿಧ ಪಕ್ಷಗಳ ಪ್ರಮುಖ ನಾಯಕರನ್ನು ಗುರಿಯಾಗಿಸಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ರಾಜಕೀಯ ವಿರೋಧಿಗಳ ವಿರುದ್ಧ ನಿರಂತರ ಸೇಡು ತೀರಿಸಿಕೊಂಡಿದೆ. ನಾವು ಜನವಿರೋಧಿ ಮೋದಿ ಸರ್ಕಾರ್ ವಿರುದ್ಧ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಪ್ರತಿಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

Join Whatsapp
Exit mobile version